ಭಾಗ್ಯಶಿಲ್ಪಿಗಳು
ಒಂದು ಅಂಕದ ಪ್ರಶ್ನೆಗಳು
ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ ರಲ್ಲಿ ಪಟ್ಟಾಭಿಷಿಕ್ತರಾದರು.
ಉತ್ತರ: ಮೈಸೂರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರು ಕಂಕಣಬದ್ಧರಾದರು.
ಉತ್ತರ: ಶಿವನಸಮುದ್ರದ ಬಳಿ ಕಾವೇರಿ ನದಿಗೆ ಏಷ್ಯಾಖಂಡದಲ್ಲಿಯೇ ಮೊದಲು ಜಲವಿದ್ಯುತ್ ಯೋಜನೆ ಪ್ರಾರಂಭಿಸಿದರು.
ಉತ್ತರ: ಬ್ರಿಟಿಷ್ ಸರಕಾರ ವಿಶ್ವೇಶ್ವರಯ್ಯ ಅವರಿಗೆ “ಸರ್” ಪದವಿಯನ್ನು ನೀಡಿ ಗೌರವಿಸಿತು.
ಉತ್ತರ: ವಿಶ್ವೇಶ್ವರಯ್ಯ ಅವರ ಹುಟ್ಟುಹಬ್ಬದ ನೆನಪಿಗಾಗಿ ಎಂಜಿನಿಯರ್ಸ್ ದಿನಾಚರಣೆಯನ್ನು ಮಾಡಲಾಗುತ್ತಿದೆ.
ಎರಡು ಅಂಕದ ಪ್ರಶ್ನೆಗಳು
ಉತ್ತರ : ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ೧) ಗ್ರಾಮನಿರ್ಮಲೀಕರಣ ೨) ವೈದ್ಯಸಹಾಯ ೩) ವಿದ್ಯಾಪ್ರಚಾರ ೪) ನೀರಿನಸೌಕರ್ಯ ೫) ಪ್ರಯಾಣಸೌಲಭ್ಯ ಮುಂತಾದ ಕ್ಷೇತ್ರಗಳು ಸ್ವಯಂ ಆಡಳಿತ ಕ್ಷೇತ್ರಗಳಾದವು.
ಉತ್ತರ : “ದುರದೃಷ್ಟವಶಾತ್” ಭಾರತೀಯರಾದ ನಾವು ಹೆಚ್ಚು ಮಾತನಾಡುವವರು ಮತ್ತು ನುಡಿದಂತೆ ನೆಡೆಯಲಾರದವರೆಂಬ ದೂಷಣೆಗೆ ಒಳಗಾಗಿದ್ದೇವೆ. ತಾವು ಈ ಮಾತಿಗೆ ಬಹು ದೊಡ್ಡ ರೀತಿಯಲ್ಲಿ ಹೊರತಾಗಿದ್ದೀರಿ. ತಾವು ಕಡಿಮೆ ಮಾತನಾಡಿದ್ದೀರಿ. ಹೆಚ್ಚು ಕೆಲಸ ಮಾಡಿದ್ದೀರಿ. ಅದನ್ನು ನಾವು ತಮ್ಮಿಂದ ಕಲಿಯೋಣ” ಎಂದು ನೆಹರೂ ಅವರು ಸರ್.ಎಂ. ವಿಶ್ವೇಶ್ವರಯ್ಯ ಅವರ ಬಗ್ಗೆ ಹೇಳಿದ್ದಾರೆ.
ಮೂರು/ನಾಲ್ಕು ಅಂಕದ ಪ್ರಶ್ನೆಗಳು
ಉತ್ತರ:
ಆಯ್ಕೆ: ಈ ಮೇಲಿನ ವಾಕ್ಯವನ್ನು ಡಿ.ಎಸ್. ಜಯಪ್ಪ ಗೌಡ ರಚಿಸಿರುವ ʼದಿವಾನ್ ಸರ ಎಂ. ವಿಶ್ವೇಶ್ವರಯ್ಯ ನವರ ಕಾರ್ಯಸಾಧನೆಗಳು ಎಂಬ ಕೃತಿಯ ಭಾಗ್ಯಶಿಲ್ಪಿಗಳು ಎನ್ನುವ ಪಾಠದಿಂದ ಆಯ್ದುಕೊಳ್ಳಲಾಗಿದೆ.
ಸಂದರ್ಭ : 1902 ರ ಅಗಸ್ಟ್ ಎಂಟನೇ ತಾರೀಖಿನಿಂದ ಮೈಸೂರು ರಾಜ್ಯದ ನೇರ ಉಸ್ತುವಾರಿ ಕೃಷ್ಣರಾಜ ಒಡೆಯರ ಸುಪರ್ದಿಗೆ ಬಂದಿತು. ಆಗ ದಿವಾನರಾಗಿದ್ದ ಸರ್ ಕೆ.ಶೇಷಾದ್ರಿ ಅಯ್ಯರ್ ಅವರ ಸಹಕಾರ ದೊಡನೆ ಮೈಸೂರು ರಾಜ್ಯದ ಸರ್ವೋತೋಮುಖ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರು ಕಂಕಣಬದ್ಧರಾದರು. ಇವರ ಕಾಲದಲ್ಲಿ ಇಡೀ ಭರತಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ಧಿಯನ್ನು ಮೈಸೂರು ರಾಜ್ಯವು ಕಂಡಿದ್ದರಿಂದ ಮೈಸೂರು ಸಂಸ್ಥಾನಕ್ಕೆ ಮಾದರಿ ಮೈಸೂರು ಎಂಬ ಕೀರ್ತಿಪ್ರಾಪ್ತವಾಯಿತು.
>
ಸ್ವಾರಸ್ಯ: ನಾಲ್ವಡಿ ಕೃಷ್ಣರಾಜ ಒಡೆಯರು ಅರಸುಮನೆತನದಿಂದ ಬಂದವರಾಗಿದ್ದರೂ ಸಹ ಜನತೆ ಆಡಳಿತದಲ್ಲಿ ಪಾಲ್ಗೊಳ್ಳುವಿಕೆಯ ಪರವಾಗಿದ್ದರು.
ಉತ್ತರ: ವಿಶ್ವೇಶ್ವರಯ್ಯರವರ ಅಧುನಿಕ ಶಿಕ್ಷಣವೇ ಎಲ್ಲಾ ಸಮಸ್ಯೆಗಳಿಗು ಪರಮೋಚ್ಚ ಪರಿಹಾರವೆಂದು ನಂಬಿದ್ದರು. ಶಿಕ್ಷಣವು ಸಂಜೀವಿನಿ ಎಂಬುದನ್ನರಿತಿದ್ದ ಅವರು ಶಿಕ್ಷಣದ ವಿವಿಧ ಯೋಜನೆಗಳನ್ನು ರೂಪಿಸಿದರು. ಅದಕ್ಕಾಗಿ 1913 ರಲ್ಲಿ ಪ್ರಾಥಮಿಕ ಶಿಕ್ಷಣ ನಿಬಂಧನೆಯನ್ನು ಜಾರಿಗೆತಂದರು. ಪ್ರೌಢಶಿಕ್ಷಣ ಶಾಲೆಗಳು ಮದ್ರಾಸ್ ವಿಶ್ವವಿದ್ಯಾಲಯದ ನಿಯಂತ್ರಣಕ್ಕೆ ಒಳಪಟ್ಟಿದವು. ಇದನ್ನು ಬದಲಿಸಿ ಸಂಸ್ಥಾನವೇ ಪ್ರತ್ಯೇಕವಾದ ಪ್ರೌಢಶಿಕ್ಷಣದ ಅಂತಿಮ ಪರೀಕ್ಷೆ ನಡೆಸುವ ಯೋಜನೆಯನ್ನು ಅರ್ಥಿಕ ಪರಿಷತ್ತಿನ ಮೂಲಕ ರೂಪುಗೊಳಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಸ್ಥಾಪನೆ ಇವರ ದೂರದೃಷ್ಟಿಯ ಮತ್ತೊಂದು ಫಲಶ್ರುತಿ. ಶಿಕ್ಷಣಕ್ಕಾಗಿ ಶಿಕ್ಷಣ ಇರಬೇಕು ಅದು ಕೆಲವೇ ಜನರ ಸೊತ್ತಾಗದೆ ಪ್ರಗತಿಪರ ರಾಜ್ಯದಲ್ಲಿ ಎಲ್ಲರ ಆಜನ್ಮ ಸಿದ್ಧಹಕ್ಕಾಗಬೇಕು” ಎಂಬುದನ್ನು ಮನಗಂಡ ಇವರು ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣಕ್ಕೆ ಆದ್ಯತೆ ನೀಡಿದರು. ಇದಕ್ಕಾಗಿಯೇ ಬೆಂಗಳೂರಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ಶಾಲೆ, ಮೈಸೂರಿನಲ್ಲಿ ಚಾಮರಾಜೇಂದ್ರ ತಾಂತ್ರಿಕ ಸಂಸ್ಥೆಗಳನ್ನು ಪ್ರಾರಂಭಿಸಿದರು. ಏಕೀಕೃತ ಕರ್ನಾಟಕದ ರಚನೆ ಮತ್ತು ಕನ್ನಡ ಭಾಷೆ ಹಾಗೂ ಸಾಹಿತ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಉಂಟಾಗಿದ್ದ ಒಲವನ್ನು ಮನಗಂಡು ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದ್ದು, ಇವರ ಕಾಲದ ಮತ್ತೊಂದು ಮಹತ್ವದ ಸಾಧನೆ.
ಉತ್ತರ: ಡಿ.ಎಸ್. ಜಯಪ್ಪಗೌಡ ಇವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯಲ್ಲಿ ೧೯೪೭ ರಲ್ಲಿ ಜನಿಸಿದರು. ದಾರದಹಳ್ಳಿ ಸುಬ್ಬೇಗೌಡ ಜಯಪ್ಪಗೌಡ ಎಂಬುದು ಇವರ ಪೂರ್ಣಹೆಸರು.
ಕರ್ನಾಟಕ ಗ್ರಾಮೀಣ ಸಂಸ್ಥೆಗಳು, ಕರ್ನಾಟಕದ ಕಡಲಾಚೆಯ ಸಂಪರ್ಕಗಳು, ಮೈಸೂರು ಒಡೆಯರು, ಜನಪದ ಆಟಗಳು, ದಿವಾನ ಸರ್. ಎಂ. ವಿಶ್ವೇಶ್ವರಯ್ಯನವರ ಕಾರ್ಯಸಾಧನೆಗಳು ಶ್ರೀಯುತರ ಪ್ರಮುಖ ಕೃತಿಗಳು. ಕರ್ನಾಟಕದ ಕಡಲಾಚೆಯ ಸಂಪರ್ಕಗಳು ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಧಾರವಾಡ ಕರ್ನಾಟಕ ಸಂಘದ ಸಂಶೋಧನ ಬಹುಮಾನಕ್ಕೆ ಭಾಜನರಾಗಿದ್ದಾರೆ.