ತ್ರಿಕೋನಮಿತಿಯ ಅನ್ವಯಗಳು
ಅಭ್ಯಾಸ ಲೆಕ್ಕಗಳು
1) 50 ಮೀ. ದೂರದಿಂದ ಲಂಬವಾಗಿ ನಿಂತಿರುವ ಒಂದು ಸ್ತಂಭವನ್ನು ಗಮನಿಸಿದಾಗ ಉಂಟಾದ ಉನ್ನತ ಕೋನವು 30° ಆದರೆ ಆ ಸ್ತಂಭದ ಎತ್ತರವನ್ನು ಕಂಡುಹಿಡಿಯಿರಿ.
2) 50√3 ಮೀ. ಎತ್ತರದಲ್ಲಿರುವ ಒಂದು ಕಟ್ಟಡದ ಮೇಲಿಂದ ನೆಲದ ಮೇಲಿರುವ ಒಂದು ಕಾರನ್ನು ನೋಡಿದಾಗ ಉಂಟಾದ ಅವನತ ಕೋನ 60° ಆದರೆ ಕಟ್ಟಡದಿಂದ ಕಾರಿಗೆ ಇರುವ ದೂರವನ್ನು ಕಂಡುಹಿಡಿಯಿರಿ.
3) 20 ಮೀ. ಎತ್ತರದ ಕಟ್ಟಡದ ಮೇಲಿಂದ ನೆಲಕ್ಕೆ ಲಂಬವಾಗಿರುವ ಒಂದು ಕಂಬದ ತುದಿಯನ್ನು ನೋಡಿದಾಗ ಉಂಟಾದ ಉನ್ನತ ಕೋನವು 30° ಆಗಿದೆ. ಹಾಗೆ ಅದೇ ಕಂಬದ ತುದಿಯನ್ನು ನೋಡಿದಾಗ ಉಂಟಾದ ಅವನತ ಕೋನವು 60° ಆದರೆ ಕಂಬದ ಎತ್ತರವನ್ನು ಕಂಡುಹಿಡಿಯಿರಿ.
4) 1.5 ಮೀ. ಎತ್ತರದ ಹುಡುಗನೊಬ್ಬ 30 ಮೀ. ಎತ್ತರದ ಕಟ್ಟಡದಿಂದ ಸ್ಪಲ್ಪ ದೂರದಲ್ಲಿ ನಿಂತಿದ್ದಾನೆ. ಕಟ್ಟಡದ ಹತ್ತಿರಕ್ಕೆ ನಡೆದು ಹೋಗುವಾಗ ಕಟ್ಟಡದ ಮೇಲ್ತುದಿಗೆ ಅವನ ಕಣ್ಣಿನಿಂದ ಉಂಟಾದ ಉನ್ನತ ಕೋನವು 30° ಯಿಂದ 60° ಹೆಚ್ಚುತ್ತದೆ. ಹಾಗಾದರೆ ಅವನು ಕಟ್ಟಡದ ಕಡೆ ಎಷ್ಟು ದೂರ ನಡೆದು ಬಂದಿದ್ದಾನೆ?
5) ಒಂದು ನೇರವಾದ ಮರವು ಗಾಳಿಗೆ ಸಿಲುಕಿ ಅದರ ಬುಡದಿಂದ 6 ಮೀ. ಎತ್ತರದಲ್ಲಿ ಮುರಿದಾಗ ಅದರ ತುದಿಯು ಮರದ ಬುಡದಿಂದ 8 ಮೀ. ದೂರದಲ್ಲಿ ನೆಲವನ್ನು ತಾಗಿರುತ್ತದೆ. ಹಾಗಾದರೆ ಮರವು ಮುರಿದು ಬೀಳುವ ಮುನ್ನ ಇದ್ದ ಅದರ ತುದಿ ಹಾಗೂ ಮುರಿದು ಬಿದ್ದ ನಂತರ ಅದರ ತುದಿಯು ನೆಲವನ್ನು ತಾಗಿರುವ ಬಿಂದುವಿಗೆ ಇರುವ ದೂರವನ್ನು ಕಂಡುಹಿಡಿಯಿರಿ. ( ಮಾರ್ಚ್/ಏಪ್ರಿಲ್ 2018)