ತ್ರಿಕೋನಮಿತಿಯ ಅನ್ವಯಗಳು
ಮುಖ್ಯಾಂಶಗಳು
ದೃಷ್ಠಿ ರೇಖೆ: ದೃಷ್ಠಿ ರೇಖೆಯು ವೀಕ್ಷಕನ ಕಣ್ಣಿನಿಂದ, ವೀಕ್ಷಕನು ಗಮನಿಸುತ್ತಿರುವ ವಸ್ತುವಿನ ಮೇಲಿನ ಒಂದು ಬಿಂದುವನ್ನು ಸೇರಿಸುವಂತೆ ಎಳೆದ ರೇಖೆಯಾಗಿದೆ.
ಉನ್ನತ ಕೋನ: ವೀಕ್ಷಿಸುತ್ತಿರುವ ಒಂದು ಬಿಂದುವು ಕ್ಷಿತಿಜ ಮಟ್ಟದಿಂದ ಮೇಲಿದ್ದು ದೃಷ್ಠಿ ರೇಖೆ ಮತ್ತು ಕ್ಷಿತಿಜ ರೇಖೆಯ ನಡುವೆ ಏರ್ಪಟ್ಟ ಕೋನವನ್ನು ವೀಕ್ಷಿಸಿತ್ತಿರುವ ಬಿಂದುವಿನ ಉನ್ನತ ಕೋನ ಎನ್ನುವರು.
ಅವನತ ಕೋನ: ವೀಕ್ಷಿಸುತ್ತಿರುವ ಒಂದು ಬಿಂದುವು ಕ್ಷಿತಿಜ ಮಟ್ಟದಿಂದ ಕೆಳಗಿದ್ದರೆ ದೃಷ್ಠಿ ರೇಖೆ ಮತ್ತು ಕ್ಷಿತಿಜ ರೇಖೆಯ ನಡುವೆ ಉಂಟಾದ ಕೋನವನ್ನು ವೀಕ್ಷಿಸಿತ್ತಿರುವ ಬಿಂದುವಿನ ಅವನತ ಕೋನ ಎನ್ನುವರು